ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಕೊಲ್ಲೂರು ಸಮೀಪದ ಕಲ್ಯಾಣಿಗುಡ್ಡೆಯ ಬಡ ಪರಿಶಿಷ್ಟ ಜಾತಿಯ ಸುಮಾರು ಮೂವತ್ತು ಕುಟುಂಬಗಳಿಗೆ ಕುಂದಾಪುರದ ನ್ಯೂ ಮೆಡಿಕಲ್ ಸೆಂಟರ್ ನ ಡಾಕ್ಟರ್ ರಂಜನ್ ಶೆಟ್ಟಿ ಅವರ ಸೂಚನೆಯ ಮೇರೆಗೆ ಇಂದು ಕೊಲ್ಲೂರು ಸರಕಾರಿ ಶಾಲೆಯ ವಠಾರದಲ್ಲಿಆಹಾರ ಕಿಟ್ ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷರಾದ ಸುನಿಲ್ ಕುಮಾರ್ ಶೆಟ್ಟಿ ಹೇರಿಕುದ್ರು ಹಾಗೂ ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂದೇಶ್ ಭಟ್, ಉಪಾಧ್ಯಕ್ಷರಾದಂತ ಹರೀಶ್ ಶೆಟ್ಟಿ ಕೊಲ್ಲೂರು ಹಾಗೂ ಯುವ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಉದಯ ಶೆಟ್ಟಿ ಮಚ್ಚಟ್ಟು, ಕೋಶಾಧಿಕಾರಿ ನಿತಿನ್ ಕುಮಾರ್ ಶೆಟ್ಟಿ ಹುಂಚನಿ, ಸಚಿನ್ ಶೆಟ್ಟಿ ವಕ್ವಾಡಿ, ಕುಂದಾಪುರ ಪುರಸಭಾ ಸದಸ್ಯ ಪ್ರಭಾಕರ ಹಾಗೂ ಸ್ಥಳೀಯರಾದ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು, ಕರುಣ್ ಶೆಟ್ಟಿ ಕಾನಕಿ ಮತ್ತು ಅರುಣ್ ಕುಮಾರ್ ಶೆಟ್ಟಿ , ಸ್ಥಳೀಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.